ಅಧಿಕಾರಿಗಳಿಗಿಂತ ವೇಶ್ಯೆಯರೇ ಉತ್ತಮ ಎಂದ ಬಿಜೆಪಿ ಶಾಸಕ..!

Prostitutes Better Than Government Officials: BJP Lawmaker
Highlights

ಅಧಿಕಾರದ ದರ್ಪವೋ ಅಥವಾ ವ್ಯವಸ್ಥೆಯ ಬಗ್ಗೆ ಆಕ್ರೋಶವೋ ಗೊತ್ತಿಲ್ಲ. ಆದರೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಭರದಲ್ಲಿ ಜನಪ್ರತಿನಿಧಿಗಳು ತಮ್ಮ ನಾಲಿಗೆಯ ಮೇಲಿನ ಹಿಡಿತವನ್ನು ಕಳೆದುಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಲಕ್ನೋ(ಜೂ.6): ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಭಾರೀ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಸಾರ್ವಜನಿಕ ಸಭೆಯಲ್ಲಿ ಈ ರೀತಿ ಬಹಿರಂಗ ಹೇಳಿಕೆ ನೀಡುವ ಮೂಲಕ ಸಭ್ಯತೆಯ ಎಲ್ಲೆ ಮೀರಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸುರೇಂದ್ರ ಸಿಂಗ್, ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ಕೆಲಸವಾಧ ಮೇಲೆ ನಮ್ಮಿಂದ ಹಣ ಪಡೆಯುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರವೂ ಕೆಲಸ ಮಾಡುವುದಿಲ್ಲ ಎಂದು ಕುಹುಕವಾಡಿದ್ದಾರೆ.

ಇನ್ನು ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ಕಳೆದ ಫೆಬ್ರುವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಂಗ್, ‘ಭಾರತ್‌ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ‌ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದರು. 

loader