ಸ್ವ ಕ್ಷೇತ್ರದಲ್ಲೇ ಸಿಎಂ ವಿರುದ್ಧ ಪ್ರತಿಭಟನೆ : ರಾಜೀನಾಮೆಗೆ ಆಗ್ರಹ

ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವ ಕ್ಷೇತ್ರದಲ್ಲೇ ಅವರ ವಿರುದ್ಧ ಪ್ರತಿಭಟನೆ ನಡೆದಿದ್ದು ರಾಜೀನಾಮೇ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಉಗ್ರರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

Protest Against CM Kumaraswamy In Ramanagara

ರಾಮನಗರ :  ರಾಜ್ಯ ಸರ್ಕಾರದ ವಿರುದ್ಧ ರಾಮನಗರದಲ್ಲಿ ಬಿಜೆಪಿ ಜಿಲ್ಲಾ ಘಟಕವು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ರಾಮನಗರದಲ್ಲಿ ಬಂಧಿತನಾದ ಭಯೋತ್ಪಾದಕ ಮುನೀರ್ ಶೇಕ್ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ತವರು ಜಿಲ್ಲೆ ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಿ.ಎಂ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಇಂತಹ ಉಗ್ರರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ. ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ಈ‌ ಕೂಡಲೇ ಗಡಿಪಾರು ಮಾಡಬೇಕು. ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. 

Latest Videos
Follow Us:
Download App:
  • android
  • ios