ಹುಬ್ಬಳ್ಳಿ ಮೊದಲಾದ ಕೆಲ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಗೌರಿ ಲಂಕೇಶ್ ಹತ್ಯೆ ಘಟನೆಯನ್ನು ಶಾಂತಿಯುತವಾಗಿ ಖಂಡಿಸಿದರು.

ಬೆಂಗಳೂರು(ಸೆ. 06): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಪತ್ರಕರ್ತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಯಿತು. ಪತ್ರಕರ್ತರಾದ ಎನ್.ಮಂಜುನಾಥ್, ಶೃಂಗೇಶ್, ವಿಮರ್ಶಕ ಡಾ. ಶ್ರೀಕಂಠ ಕೂಡಿಗೆ, ಕೋಮುಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್, ಶಿವಕುಮಾರ್, ಸರ್ಜಾಶಂಕರ ಹರಳೀಮಠ ಮತ್ತಿತರರು ಭಾಗವಹಿಸಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ, ಹುಬ್ಬಳ್ಳಿ ಮೊದಲಾದ ಕೆಲ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಗೌರಿ ಲಂಕೇಶ್ ಹತ್ಯೆ ಘಟನೆಯನ್ನು ಶಾಂತಿಯುತವಾಗಿ ಖಂಡಿಸಿದರು.

ಇನ್ನು, ನಾಳೆ ರಾಜ್ಯಾದ್ಯಂತ ಹಲವು ಕಡೆ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಟೌನ್ ಹಾಲ್'ನಲ್ಲೂ ಪ್ರತಿಭಟನೆಗಳಾಗಲಿವೆ.