ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬಸವರಾಜ ದೇವರು ಶ್ರೀಗಳು ಪಟ್ಟನಾಯಕನಹಳ್ಳಿ ಗ್ರಾಮಸ್ಥರೊಂದಿಗೆ ಅನ್ನ ಸತ್ಯಾಗ್ರಹ ಮುಂದುವರೆಸಿದ್ದಾರೆ.
ತುಮಕೂರು(ಜ.08): ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ನಂಜಾವಧೂತ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬಸವರಾಜ ದೇವರು ಶ್ರೀಗಳು ಪಟ್ಟನಾಯಕನಹಳ್ಳಿ ಗ್ರಾಮಸ್ಥರೊಂದಿಗೆ ಅನ್ನ ಸತ್ಯಾಗ್ರಹ ಮುಂದುವರೆಸಿದ್ದಾರೆ.
ಇಂದು ಕೂಡಾ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದಾರೆ. ಮಠದ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡ ಆರೋಪ ಹಾಗೂ ಅರ್ಚಕರ ಮೇಲೆ ಹಲ್ಲೆ ನಡೆಸಿದ ಆರೋಪ ನಂಜಾವಧೂತ ಶ್ರೀಗಳ ಮೇಲಿದೆ. ಹೀಗಾಗಿ ಶ್ರೀಗಳ ಅಕ್ರಮ, ದೌರ್ಜನ್ಯ ಖಂಡಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆದಿದೆ.
