ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಶಾಸಕ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಗು(ನ.10): ಟಿಪ್ಪು ಜಯಂತಿ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿಯ ಕೋಟೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದ ಬಳಿ ಆಗಮಿಸಿದ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರ ಬಳಿ ಸಭೆ ನಡೆಸಿ ಪ್ರತಿಭಟನೆಗೆ ಮುಂದಾದರು. ಇವರಿಗೆ ಬಿಜೆಪಿ ಪರಿಷತ್ ಸದಸ್ಯ ಸುನೀಲ್ ಸಬ್ರಮಣಿ ಸಾಥ್ ನೀಡಿದರು.

ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಶಾಸಕ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.