ಸ್ವಾತಂತ್ರ್ಯ ದಿನಾಚರಣೆ ವೇಳೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಕೈ ಸವರಿದ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟಿ.ಪಿ ರಮೇಶ್ ಅಸಭ್ಯ ವರ್ತನೆ ಖಂಡಿಸಿ ಮಡಿಕೇರಿ ಹಾಗೂ ಮಕ್ಕಂದೂರು ಕೊಡವ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಡಿಕೇರಿ(ಆ.19): ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಕೈ ಸವರಿದ ಟಿ ಪಿ ರಮೇಶ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ. ಅಲ್ಲದೆ ರಾಜೀನಾಮೆಗೆ ಒತ್ತಾಯಿಸಿರುವ ಕೊಡವ ಸಮಾಜ, ಇವತ್ತು ಪ್ರತಿಭಟನಾ ರಾಲಿ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಜಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಮತ್ತೊಂದೆಡೆ ಪರಮೇಶ್ವರ್ ಕೂಡ ಟಿ.ಪಿ ರಮೇಶ್‌ಗೆ ತರಾಟೆ ತೆಗೆದುಕೊಂಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವೇಳೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಕೈ ಸವರಿದ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟಿ.ಪಿ ರಮೇಶ್ ಅಸಭ್ಯ ವರ್ತನೆ ಖಂಡಿಸಿ ಮಡಿಕೇರಿ ಹಾಗೂ ಮಕ್ಕಂದೂರು ಕೊಡವ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಕೊಡವ ಸಮಾಜದ ಸದಸ್ಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸೋಮೋಟೋ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.