ಲಂಡನ್(ಸೆ.04): ಜಮ್ಮು-ಕಾಶ್ಮೀರದಲ್ಲಿ ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ಲಂಡನ್‌ನ ಭಾರತೀಯ ರಾಯಭಾರ ಕಚೇರಿ ಮುಂದೆ ಹಿಂಸಾತ್ಮಕ ಪ್ರತಿಭಟನೆ ನಡೆಸಲಾಗಿದೆ.

ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕಣಿವೆಯಲ್ಲಿ ಭಾರತ ಸರ್ಕಾರ ನಿರಂತರವಾಗಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದ್ದು, ಇದನ್ನು ಖಂಡಿಸಿ ಕೆಲ ಪಾಕಿಸ್ತಾನ ಬೆಂಬಲಿಗರು ಭಾರತೀಯ ಹೈಕಮಿಷನ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಪ್ರತಿಭಟನೆ ಹಿಂಸಾರೂಪಕಕೆ ತಿರುಗಿದ್ದು, ಭಾರತೀಯ ರಾಯಭಾರ ಕಚೇರಿತ್ತ ಕಲ್ಲು ತೂರಾಟ ನಡೆಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಹೈಕಮಿಷನ್ ಕಚೇರಿ, ಪ್ರತಿಭಟನೆ ಹೆಸರಲ್ಲಿ ಕಾನೂನು ಉಲ್ಲಂಘಿಸಿದರ ವವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಇನ್ನು ಭಾರತ ಹೈಕಮಿಷನ್ ಕಚೇರಿ ಟ್ವೀಟ್'ಗೆ ಗೆ ಪ್ರತಿಕ್ರಿಯಿಸಿದ ಲಂಡನ್ ಮೇಯರ್ ಸಾದಿಕ್ ಖಾನ್, ಹಿಂಸಾತ್ಮಕ ಪ್ರತಿಭಟನೆಯನ್ನು ಖಂಡಿಸುವುದಾಗಿ ಹೇಳಿದ್ದಾರೆ. ಸದ್ಯ ಘಟನೆಗೆ ಸಂಬಂಧಪಟ್ಟಂತೆ ಲಂಡನ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.