ಬೆಂಗಳೂರು(ಸೆ.12): ನಗರದಲ್ಲಿ ಕಾವೇರಿ ಗಲಭೆ ತೀವ್ರವಾಗಿ ಹೆಚ್ಚಾಗುತ್ತಿದ್ದು, ಸುಂಕದಕಟ್ಟೆಯಲ್ಲಿ ಪ್ರತಿಭಟನಾಕಾರರು ಅಂಗಡಿಯೊಂದಕ್ಕೆ ಬೆಂಕಿ ಹಚ್ಚುವ ಯತ್ನ ನಡೆಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸುವಾಗ ಡಿಸಿಪಿ ಸುರೇಶ್, ಎಸ್'ಐ, ಇಬ್ಬರು ಪೇದೆ ಸ್ಳಳೀಯರಿಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.