ಕಾಲಾ ಚಿತ್ರಪ್ರದರ್ಶನಕ್ಕೆ ರಾಜ್ಯದಲ್ಲಿ ಅವಕಾಶ ಮಾಡಿಕೊಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ನೀಡಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. 

ಬೆಂಗಳೂರು: ಕಾಲಾ ಚಿತ್ರಪ್ರದರ್ಶನಕ್ಕೆ ರಾಜ್ಯದಲ್ಲಿ ಅವಕಾಶ ಮಾಡಿಕೊಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್, ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ನೀಡಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾವೇರಿ ಬಗ್ಗೆ ರಜನೀಕಾಂತ್ ಹೇಳಿಕೆಯನ್ನು ವಿರೋಧಿಸಿ ಅವರು ಅಭಿನಯಿಸಿರುವ ಕಾಲಾ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡುವುದಿಲ್ಲವೆಂದು ಕನ್ನಡ ಸಂಘಟನೆಗಳು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿಕೆ ನೀಡಿದ್ದರು. ಇದರಿಂದ ಆತಂಕಗೊಂಡಿದ್ದ ಚಿತ್ರತಂಡ ಹೈಕೋರ್ಟ್‌ ಮೆಟ್ಟಿಲೇರಿತ್ತು.