ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಭಾರತೀಯ ಯೊಧರ ಹತ್ಯೆಗೆ ಸಂಬಂಧಿಸಿದಂತೆ ಭಾರತ ನೀಡಿರುವ ಹೇಳಿಕೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ. ಇದೊಂದು ಆಂತರಿಕ ರಾಜಕಾರಣ ಎಂದು ಹೇಳಿದೆ.
ನವದೆಹಲಿ (ಮೇ.04): ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಭಾರತೀಯ ಯೊಧರ ಹತ್ಯೆಗೆ ಸಂಬಂಧಿಸಿದಂತೆ ಭಾರತ ನೀಡಿರುವ ಹೇಳಿಕೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ. ಇದೊಂದು ಆಂತರಿಕ ರಾಜಕಾರಣ ಎಂದು ಹೇಳಿದೆ.
ಪಾಕಿಸ್ತಾನ ಸೇನೆಯು ಭಾರತೀಯ ಸೈನಿಕರನ್ನು ಹತ್ಯೆಗೈದಿಲ್ಲ. ಅಂತಹ ಯಾವ ಘಟನೆಯೂ ನಡೆದಿಲ್ಲ. ಭಾರತ ಪ್ರಚೋದನಾತ್ಮಕ ಹೇಳಿಕೆ ನೀಡಿದೆಯೆಂದು ಪಾಕಿಸ್ತಾನ ವಿದೇಶಾಂಗ ವಕ್ತಾರ ನಫೀಜ್ ಜಕಾರಿಯಾ ರೇಡಿಯೋ ಸಂದರ್ಶನದಲ್ಲಿ ಹೇಳಿದ್ದಾರೆ.
ವಿಶ್ವಸಂಸ್ಥೆ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸುವ ಎಲ್ಲಾ ಹಕ್ಕನ್ನು ಭಾರತ ಕಳೆದುಕೊಂಡಿದೆ. ಸುಖಾಸುಮ್ಮನೆ ಪ್ರಚೋದನಾತ್ಮಕ ಹೇಳಿಕೆ ನೀಡಿ ವಾತಾವರಣವನ್ನು ಕಲುಷಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ನಫೀಜ್ ಜಕಾರಿಯಾ ಹೇಳಿದ್ದಾರೆ.
