ವಾಹನ ತಪಾಸಣೆ ಮಾಡುವ ವೇಳೆ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಬೀದರ್(ನ.19): ದ್ವಿಚಕ್ರ ವಾಹನ ಸವಾರರಿಗೆ ದಾಖಲೆ ಪರಿಶೀಲನೆ ಮಾಡದೇ ದಂಡ ವಿಧಿಸುತ್ತಿದ್ದ ಟ್ರಾಫಿಕ್ ಪೊಲೀಸ್'ನವರಿಗೆ ಸಾರ್ವಜನಿಕರೇ ಗೂಸಾ ಕೊಟ್ಟ ಘಟನೆ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.

ವಾಹನ ತಪಾಸಣೆ ಮಾಡುವ ವೇಳೆ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಸಾರ್ವಜನಿಕರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಸಾರ್ವಜನಿಕರಿಗೆ ಲಾಠಿ ರುಚಿ ತೋರಿಸಿದ್ದಾರೆ.