ನವದೆಹಲಿ (ಏ. 01):  ಬಿಜೆಪಿ ನೇತೃತ್ವದ ಸರ್ಕಾರ ಭಾರತದ ಆರ್ಥಿಕತೆಯನ್ನು ನಾಶ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಸಾರ್ವಜನಿಕ ಸಾಲ 30 ಲಕ್ಷ ಕೋಟಿ ರು.ಗಳಷ್ಟುಏರಿಕೆಯಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

2014ರಿಂದ 2018ರ ಅವಧಿಯ ಹಣಕಾಸು ದಾಖಲೆಗಳ ಉದಾಹರಣೆ ನೀಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲ, 2014ರಲ್ಲಿ ಸರ್ಕಾರದ ಸಾರ್ವಜನಿಕ ಸಾಲ 53 ಲಕ್ಷ ಕೋಟಿ ರು. ಇತ್ತು. 2018ರಲ್ಲಿ ಅದು 83 ಲಕ್ಷ ಕೋಟಿ ರು.ಗೆ ಏರಿದೆ. ಮೋದಿ ಸರ್ಕಾರ 30 ಲಕ್ಷ ಕೋಟಿ ಹೆಚ್ಚುವರಿ ಸಾಲ ಮಾಡಿ ದೇಶವನ್ನು ಸಾಲದ ಕೂಪಕ್ಕೆ ತಳ್ಳಿದೆ ಎಂದು ಆರೋಪಿಸಿದ್ದಾರೆ.