ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್'ನ ಹಿಂಭಾಗದ ಗೋಡೆ ಕುಸಿತ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಸಾರ್ವಜನಿಕರಿಗೆ ಮಾಲ್ ಬಂದ್ ಮಾಡಲಾಗಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಕ್ಷಣದಿಂದಲೇ ಮಾಲ್ ಆಕ್ಯುಪೆನ್ಸಿ ಪ್ರಮಾಣ ಪತ್ರ ರದ್ದು ಮಾಡಿ, ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗಿದೆ.
ಬೆಂಗಳೂರು(ಜ.17): ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್'ನ ಹಿಂಭಾಗದ ಗೋಡೆ ಕುಸಿತ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಸಾರ್ವಜನಿಕರಿಗೆ ಮಾಲ್ ಬಂದ್ ಮಾಡಲಾಗಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಕ್ಷಣದಿಂದಲೇ ಮಾಲ್ ಆಕ್ಯುಪೆನ್ಸಿ ಪ್ರಮಾಣ ಪತ್ರ ರದ್ದು ಮಾಡಿ, ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗಿದೆ.
ಅಲ್ಲದೇ ಕಟ್ಟಡದ ಸ್ಥಿತಿ ಬಗ್ಗೆ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂತ ಬಿಬಿಎಂಪಿ ಕಮಿಷನರ್ ಹೇಳಿದ್ದಾರೆ. 7 ವರ್ಷದ ಹಳೆಯ ಕಟ್ಟಡವಾಗಿದ್ದು, ಗೋಡೆ ಕುಸಿತದಿಂದಾಗಿ ಅಕ್ಕ, ಪಕ್ಕದ ಗೋಡೆಗಳು ಬಿರುಕು ಬಿಟ್ಟಿವೆ. ಹೀಗಾಗಿ ಕಟ್ಟಡದ ಸುರಕ್ಷತೆ ಕುರಿತು ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನೀರು ಸರಬರಾಜು ಪೈಪ್ ತುಂಡಾಗಿ 1ರಿಂದ 3ನೇ ಮಹಡಿಯಲ್ಲಿ ನೀರು ತುಂಬಿಕೊಂಡಿತ್ತು. ನೀರು ಸಂಗ್ರಹದಿಂದ ಹಿಂಭಾಗದ ಗೋಡೆ ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅಲ್ಲದೆ ಮತ್ತಷ್ಟು ಗೋಡೆ ಕುಸಿಯುವ ಸಾಧ್ಯತೆ ಇದೆ.
