ಮೈಸೂರು[ಮಾ.17]: ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಎಚ್‌.ಆರ್‌. ರಂಗನಾಥ್‌ ಅವರ ತಾಯಿ ಲೀಲಾ ರಾಮಕೃಷ್ಣಯ್ಯ(86) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾದರು.

ಲೀಲಾ ರಾಮಕೃಷ್ಣಯ್ಯ ಅವರಿಗೆ ರಂಗನಾಥ್‌ ಸೇರಿದಂತೆ ಮೂವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆಯು ಭಾನುವಾರ ಬೆಳಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರ ಘಾಟ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಲೀಲಾ ರಾಮಕೃಷ್ಣಯ್ಯ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಅವರ ನಿಧನದ ನೋವು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.