ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಕಳೆದ ವರ್ಷ ಎರಡು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಭಾರೀ ಮುಜುಗರಕ್ಕೊಳಗಾಗಿದ್ದ ಪಿಯು ಬೋರ್ಡಿಗೆ, ಮತ್ತೊಂದು ಅಗ್ನಿ ಪರೀಕ್ಷೆ ಶುರುವಾಗಿದೆ ಪರೀಕ್ಷೆಗೆ ಸಂಬಂಧಿಸಿದಂತೆ ಸಕಲ ತಯಾರಿಯನ್ನ ನಡೆಸಿದ್ದು. ಈ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಭಾರೀ ಭದ್ರತೆಯೊಂದಿಗೆ ಪರೀಕ್ಷೆ ನಡೆಯುತ್ತಿದೆ. ಈ ಬಾರಿ 6ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ 1:30ರ ವರೆಗೂ ಪರೀಕ್ಷೆ ನಡೆಯಲಿದೆ..

ಬೆಂಗಳೂರು(ಮಾ.09): ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಕಳೆದ ವರ್ಷ ಎರಡು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಭಾರೀ ಮುಜುಗರಕ್ಕೊಳಗಾಗಿದ್ದ ಪಿಯು ಬೋರ್ಡಿಗೆ, ಮತ್ತೊಂದು ಅಗ್ನಿ ಪರೀಕ್ಷೆ ಶುರುವಾಗಿದೆ ಪರೀಕ್ಷೆಗೆ ಸಂಬಂಧಿಸಿದಂತೆ ಸಕಲ ತಯಾರಿಯನ್ನ ನಡೆಸಿದ್ದು. ಈ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಭಾರೀ ಭದ್ರತೆಯೊಂದಿಗೆ ಪರೀಕ್ಷೆ ನಡೆಯುತ್ತಿದೆ. ಈ ಬಾರಿ 6ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ 1:30ರ ವರೆಗೂ ಪರೀಕ್ಷೆ ನಡೆಯಲಿದೆ..

ರಾಜ್ಯದಲ್ಲಿರುವ ಪರೀಕ್ಷಾ ಅಭ್ಯರ್ಥಿಗಳು ಎಷ್ಟು..?

ಈ ಬಾರಿ ಒಟ್ಟು 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 3 ಲಕ್ಷದ 48 ಸಾವಿರದ 562 ವಿದ್ಯಾರ್ಥಿಗಳು ಹಾಗೂ 3ಲಕ್ಷದ 35 ಸಾವಿರದ 909 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ರೆ, 19 ಮಂದಿ ತೃತೀಯ ಲಿಂಗಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

ಇನ್ನೂ ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳ ಅಂಕಿ ಅಂಶ

ಬಾರಿ ರಾಜ್ಯಾದ್ಯಂತ 998 ಪರೀಕ್ಷಾ ಕೇಂದ್ರಗಳಿದ್ದು, ಇದ್ರಲ್ಲಿ 857 ಸಾಮಾನ್ಯ , 103 ಸೂಕ್ಷ್ಮ ಹಾಗೂ 38 ಅತಿ ಸೂಕ್ಷ್ಮ ಕೇಂದ್ರಗಳಿವೆ.

ಈ ಬಾರಿ ಪರೀಕ್ಷೆಯಲ್ಲಿ ಕಟ್ಟು ನಿಟ್ಟಿನ ನಿಯಮ ಅನುಸರಿಸಲಾಗುತ್ತದೆ ಎಂದು ಶಿಕ್ಷ ಸಚಿವ ತನ್ವೀರ್ ಸೇಠ್ ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿಯಲ್ಲಿ ಆದಂತ ಲೋಪಗಳು ನಡೆಯದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ವಿದ್ಯಾರ್ಥಿಗಳೇ ಭಯ ಬೇಡ.. ಪ್ರಾಮಾಣಿಕವಾಗಿ ಧೈರ್ಯವಾಗಿ ಪರೀಕ್ಷೆ ಎದುರಿಸಿ ಆಲ್ ದಿ ಬೆಸ್ಟ್