ಈ ವರ್ಷ 6.58 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 1.5 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳುವವರಾಗಿದ್ದಾರೆ ಮತ್ತು 30,000 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.

ಬೆಂಗಳೂರು (ಫೆ.19): ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 9ರಂದು ಆರಂಭವಾಗಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ವರ್ಷ 6.58 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 1.5 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳುವವರಾಗಿದ್ದಾರೆ ಮತ್ತು 30,000 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.

ಕಳೆದ ವರ್ಷ ಅನೇಕ ಅಕ್ರಮ ನಡೆದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅವರದೇ ಕಾಲೇಜಿನಲ್ಲಿ ಈ ವರ್ಷ ಪರೀಕ್ಷೆ ಬರೆಯಲು ಬಿಡುತ್ತಿಲ್ಲ. ಅಷ್ಟೇ ಅಲ್ಲದೇ ಈ ವರ್ಷ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.

ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು 2 ವಾರ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ನಿಯಮ ಪಾಲಿಸದಿದ್ದರೆ ಅಂತಹ ಕೇಂದ್ರಗಳನ್ನು ರದ್ದುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.