ಇಂದು ನಿಮ್ಮ ಮಕ್ಕಳಿಗೆ ಮರೆಯದೇ ಪೋಲಿಯೋ ಲಸಿಕೆ ಹಾಕಿಸಿ

Pulse Polio programme
Highlights

ಆರೋಗ್ಯ ಇಲಾಖೆಯು ಜ.28 ರಂದು ಭಾನುವಾರ ‘ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮ’ ಹಮ್ಮಿಕೊಂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 10.32 ಲಕ್ಷ ಮಕ್ಕಳು ಸೇರಿ ರಾಜ್ಯಾದ್ಯಂತ 5 ವರ್ಷದೊಳಗಿನ 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಬೆಂಗಳೂರು: ಆರೋಗ್ಯ ಇಲಾಖೆಯು ಜ.28 ರಂದು ಭಾನುವಾರ ‘ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮ’ ಹಮ್ಮಿಕೊಂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 10.32 ಲಕ್ಷ ಮಕ್ಕಳು ಸೇರಿ ರಾಜ್ಯಾದ್ಯಂತ 5 ವರ್ಷದೊಳಗಿನ 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಕ್ಕಳಿಗೆ ಲಸಿಕೆ ಹಾಕುವ ಸಲುವಾಗಿ 3,347 ಲಸಿಕಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ 32,437 ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. 52, 972  ತಂಡಗಳ 1,03,944 ಲಸಿಕಾ ಕಾರ್ಯಕರ್ತರು, 6,546 ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ವಿಮಾನ ನಿಲ್ದಾಣಗಳಲ್ಲಿಯೂ ಲಸಿಕೆ ಹಾಕಲಾಗುವುದು. ವಲಸಿಗರು, ಅಲೆಮಾರಿಗಳ ಮಕ್ಕಳಿಗೂ ಪೋಲಿಯೋ ಲಿಸಿಕೆ ಹಾಕುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

loader