ಬೆಂಗಳೂರು (ಆ. 16):  ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರು. ದೇಣಿಗೆ ನೀಡಿದ್ದಾರೆ.

ನೆರೆ ಸಂತ್ರಸ್ತರಿಗೆ ಕೊಲ್ಲೂರು ದೇವಳದಿಂದ 1 ಕೋಟಿ ರು. ನೆರವು

ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚೆಕ್‌ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್‌, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಉಂಟಾಗಿದ್ದು, ಅಲ್ಲಿನ ಜನತೆಗೆ ಕೈಲಾದಷ್ಟುನೆರವು ನೀಡಬೇಕು.

ಪರಿಹಾರ ಕೇಂದ್ರಗಳಾದ ಶಾಲೆಗಳು : ಆಗಸ್ಟ್ 20ರವರೆಗೆ ರಜೆ ವಿಸ್ತರಣೆ

ಹೀಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೆರವು ಕೊಡುವ ಸಲುವಾಗಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. ಇನ್ನಷ್ಟುಆರ್ಥಿಕ ನೆರವು ಕೊಡುವ ಯೋಜನೆ ಇದೆ. ಇದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದಾಗಿ ಪುನೀತ್‌ ತಿಳಿಸಿದರು.