ಪಾಕಿಸ್ತಾನ ಡ್ರೋನ್‌ಗಳನ್ನು ಬಳಸಿಕೊಂಡು ಪಂಜಾಬಿನ ಗಡಿಯ ಒಳಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ಚಂಡೀಗಢ (ಸೆ. 25): ಪಾಕಿಸ್ತಾನ ಡ್ರೋನ್‌ಗಳನ್ನು ಬಳಸಿಕೊಂಡು ಪಂಜಾಬಿನ ಗಡಿಯ ಒಳಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಯಾಚಿನ್‌ ಯುದ್ಧ ಭೂಮಿ ಇನ್ನು ಸಾಮಾನ್ಯರಿಗೂ ಮುಕ್ತ!

ಖಲಿಸ್ತಾನ್ ಜಿಂದಾಬಾದ್ ಪಡೆಯ ಭಯೋತ್ಪಾದಕ ಘಟಕವೊಂದನ್ನು ಪಂಜಾಬ್ ಪೊಲೀಸರು ಭಾನುವಾರ ಬಯಲಿಗೆಳೆದಿದ್ದರು. ಈ ಸಂಬಂಧ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಅವರಿಂದ ೫ ಎಕೆ47 ರೈಫಲ್, 4 ಚೀನಾ ನಿರ್ಮಿತ ಪಿಸ್ತೂಲ್, 16 ಮ್ಯಾಗಜಿನ್ ಮತ್ತು 472 ಸುತ್ತು ಮದ್ದುಗುಂಡುಗಳು ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಭಾರತ, ಪಾಕಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ

ಬಂಧಿತರ ವಿಚಾರಣೆ ವೇಳೆ ಇವರೆಲ್ಲಾ ಪಂಜಾಬ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಣಿ ದಾಳಿಗಳನ್ನು ನಡೆಸಲು ಸಂಚು ರೂಪಿಸಿದ್ದು ಕಂಡುಬಂದಿತ್ತು. ಅಲ್ಲದೆ ತಮ್ಮ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸಂವಹನ ಉಪಕರಣಗಳನ್ನು ಪಾಕಿಸ್ತಾನವು ಡ್ರೋನ್ ಮೂಲಕ ಗಡಿಯಾಚೆಗಿಂದ ರವಾನಿಸಿತ್ತು ಎಂದು ಉಗ್ರರು ಬಾಯಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಕುರಿತು ಗಮನ ಹರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಗ್ರಹಿಸಿದ್ದಾರೆ.