ಸಿದ್ದರಾಮಯ್ಯ ಅವರೇ ನನಗೆ ಮುಖ್ಯಮಂತ್ರಿ

Puttaranga Shetty says for me even now Siddaramaiah is CM
Highlights

ಕರ್ನಾಟಕಕ್ಕೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ. ಆದರೆ ನನಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಪುನರುಚ್ಚರಿಸಿದರು. 

ಚಾಮರಾಜನಗರ: ಕರ್ನಾಟಕಕ್ಕೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ. ಆದರೆ ನನಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಪುನರುಚ್ಚರಿಸಿದರು. 

ಸಚಿವರಾದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಚಾಮರಾಜನಗರಕ್ಕೆ ಭೇಟಿ ನೀಡಿದ ಪುಟ್ಟರಂಗಶೆಟ್ಟಿ, ಚಾಮರಾಜೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನನಗೆ ಮಂತ್ರಿ ಸ್ಥಾನ ನೀಡುವುದಾಗಿ ಚುನಾವಣೆಗೂ ಮೊದಲೇ ಚಾಮರಾಜ ನಗರಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಭರವಸೆ ನೀಡಿದ್ದರು. 

ಅದರಂತೆ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಹಿಂದುಳಿದವರ ಪಾಲಿಗೆ ಸಿದ್ದರಾಮಯ್ಯ ಮತ್ತೊಬ್ಬ ದೇವರಾಜ ಅರಸು ಇದ್ದಂತೆ ಎಂದರು.

loader