ಕಾಂಗ್ರೆಸ್ ಹಿರನಾಯಕ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶರಾಗಿದ್ದಾರೆ. ಖಮರುಲ್ ಇಸ್ಲಾಂ (69) ಇಂದು ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಗಿದ್ದ ಖಮರುಲ್ ಇಸ್ಲಾಂ, 1978ರಲ್ಲಿ ರಾಜಕೀಯ ಪ್ರವೇಶ ಮಾಡಿ, 1978ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಹಾಲಿ ಕಲಬುರಗಿ ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಮೂರು ಬಾರಿ ಮುಸ್ಲಿಂ ಲೀಗ್’ನಿಂದ ಶಾಸಕರಾಗಿ ಆಯ್ಕೆಯಾಗಿದ್ದರೆ, ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1996ರಲ್ಲಿ ಜನತಾ ದಳದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.

ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ, ಕಾರ್ಮಿಕ ಇಲಾಖೆ ಹಾಗೂ ಹಜ್ಜ್ ಇಲಾಖೆಯ ಸಚಿವರಾಗಿದ್ದ ಖಮರುಲ್ ಇಸ್ಲಾಂ, ಸಿದ್ದರಾಮಯ್ಯ ಸರ್ಕಾರದಲ್ಲಿ ಮೂಲಭೂತ ಸೌಕರ್ಯಾಭಿವೃದ್ಧಿ ಹಾಗೂ ಹಜ್ಜ್ ಸಚಿವರಾಗಿದ್ದರು. ಎಐಸಿಸಿ ಕಾರ್ಯದರ್ಶಿಯಾಗಿದ್ದ ಖಮರುಲ್ ಇಸ್ಲಾಂ, ಕೇರಳ ರಾಜ್ಯ ಕಾಂಗ್ರೆಸ್ ಉಸ್ತುವಾರರರಾಗಿಯೂ ಕೆಲಸ ಮಾಡಿದ್ದರು.