ಸಚಿವ ಸ್ಥಾನ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ನಂತರದ ದಿನಗಳಿಂದ ಪಕ್ಷದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ.

ಬೆಂಗಳೂರು(ಮಾ.07): ನಿನ್ನೆಯಷ್ಟೆ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಬಿಎಸ್'ವೈ ನೇತೃತ್ವದ ಬಿಜೆಪಿ ಮುಖಂಡರು ಭೇಟಿ ನೀಡಿ ಬಿಜೆಪಿಗೆ ಆಹ್ವಾನಿಸಿದ್ದರು. ಕೃಷ್ಣರವರು ಬಿಜೆಪಿಗೆ ಸೇರುವ ದಿನಾಂಕವನ್ನು ಖಚಿತಪಡಿಸದಿದ್ದರೂ ಸಕಾರಾತ್ಮಕವಾಗಿ ಪ್ರತಿಕ್ರಯಿಸಿ ಶೀಘ್ರದಲ್ಲಿಯೇ ಸೇರ್ಪಡೆಯ ಮುನ್ಸೂಚನೆ ನೀಡಿದ್ದರು.

ಈಗ ಸಚಿವ ಸ್ಥಾನ ಕಳೆದುಕೊಂಡಿರುವ ಮತ್ತೊಬ್ಬ ಮಂಡ್ಯದ ಮತ್ತೊಬ್ಬ ಒಕ್ಕಲಿಗ ಮುಖಂಡ ಹಾಗೂ ಸಿನಿಮಾ ನಟ ಅಂಬರೀಶ್'ಗೆ ಗಾಳ ಹಾಕಿದ್ದಾರೆ. ಇಂದು ಜೆಪಿ ನಗರದ ರೆಬಲ್'ಸ್ಟಾರ್ ನಿವಾಸಕ್ಕೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ಮುಖಂಡ ಆರ್. ಅಶೋಕ್ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.ಭಾರತೀಯ ಜನತಾ ಪಾರ್ಟಿಗೆ ಆಹ್ವಾನಿಸುವ ನಿಟ್ಟಿನಲ್ಲಿ ಹಾಗೂ ಅವರ ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಅಂಬರೀಷ್ ಸಚಿವ ಸ್ಥಾನ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ನಂತರದ ದಿನಗಳಿಂದ ಪಕ್ಷದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಅಶೋಕ್ ಹಾಗೂ ಅಂಬರೀಶ್ ಭೇಟಿ ಹೆಚ್ಚು ಮಹತ್ವ ಪಡೆದಿದೆ.