ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನ.2ರಂದು ನಗರದ ಹೊರವಲಯದಲ್ಲಿನ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಉದ್ಘಾಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭವು ನಿರೀಕ್ಷಿತ ಸಂಖ್ಯೆ ಕಾರ್ಯಕರ್ತರಿಲ್ಲದೇ ಅವ್ಯವಸ್ಥೆ ಉಂಟಾಗಿತ್ತು. ಈ ಬಗ್ಗೆ ಸಮಾರಂಭಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು.
ಬೆಂಗಳೂರು(ನ.08): ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾವೇಶ ವಿಫಲವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರಿಗೆ ಬಿಜೆಪಿಯ ಹಿರಿಯ ಮುಖಂಡ ಆರ್.ಅಶೋಕ್ ಕಾರಣಗಳ ಸಹಿತ ವರದಿ ಸಲ್ಲಿಸಿದರು.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನ.2ರಂದು ನಗರದ ಹೊರವಲಯದಲ್ಲಿನ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಉದ್ಘಾಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭವು ನಿರೀಕ್ಷಿತ ಸಂಖ್ಯೆ ಕಾರ್ಯಕರ್ತರಿಲ್ಲದೇ ಅವ್ಯವಸ್ಥೆ ಉಂಟಾಗಿತ್ತು. ಈ ಬಗ್ಗೆ ಸಮಾರಂಭಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕೂಡ ಅಸಮಧಾನ ವ್ಯಕ್ತಪಡಿಸಿದ್ದರು. ವೈಫಲ್ಯಕ್ಕೆ ಕಾರಣಗಳ ಪಟ್ಟಿ ಮಾಡಿ ಅಶೋಕ್ ಅವರು ವಿವರಣೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಜೊತೆ ನಡೆಸಿದ ಜವಡೇಕರ್ ಅವರು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗಾಗಿ ಚರ್ಚೆ ನಡೆಸಿದರು.
ಪರಿವರ್ತನಾ ಯಾತ್ರೆಯು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳನ್ನೂ ಒಳಗೊಳ್ಳಲಿದೆ. 75 ದಿನಗಳನ್ನು ಕ್ರಮಿಸುವ ಯಾತ್ರೆಯು 7.500 ಕಿ.ಮೀ ದೂರ ಕ್ರಮಿಸುವ ಉದ್ದೇಶ ಹೊಂದಿದೆ.
ಯಾತ್ರೆ ಸಂಚರಿಸುವ ಮಾರ್ಗ:
ಬೆಂಗಳೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪರಿವರ್ತನಾ ಯಾತ್ರೆ ಸಂಚರಿಸಲಿದೆ.
ಬೃಹತ್ ಬೈಕ್ ರ್ಯಾಲಿ:
ಯಾತ್ರೆಯ ಅಂಗವಾಗಿ ಎರಡು ಹಂತದಲ್ಲಿ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ. ಮೊದಲ ಹಂತದ ಯಾತ್ರೆಗೆ ದಕ್ಷಿಣ ಕರ್ನಾಟಕದ 14 ಜಿಲ್ಲೆಗಳ ಕಾರ್ಯಕರ್ತರು ಬೈಕ್'ಗಳ ಮೂಲಕ ಪಾಲ್ಗೊಳ್ಳಲಿದ್ದಾರೆ. ನಂತರ ಡಿಸೆಂಬರ್ 12ರಂದು ಹುಬ್ಬಳ್ಳಿಯಲ್ಲಿ ಬೈಕ್ ರ್ಯಾಲಿ ಮತ್ತು ಸಮಾವೇಶ ನಡೆಯಲಿದ್ದು, 80 ಸಾವಿರ ಬೈಕ್'ಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಕೊಡಗು ಪ್ರವೇಶ ಇಲ್ಲ:
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಾತ್ರೆ ಕೊಡಗು ಪ್ರವೇಶಿಸಲು ಪೊಲೀಸರು ಅನುಮತಿ ನೀಡಿಲ್ಲ. ಹೀಗಾಗಿ, ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದೆಡೆ ಯಾತ್ರೆ ಸಂಚರಿಸಲಿದೆ. ಕನಿಷ್ಠ ಪಕ್ಷ ಕೊಡಗು ಜಿಲ್ಲೆಯ ಗಡಿ ಭಾಗದ ಯಾವುದಾದರೊಂದು ಸ್ಥಳದಲ್ಲಿ ಪ್ರವೇಶಕ್ಕೆ ಅವಕಾಶ ಕೊಡುವಂತೆ ಬಿಜೆಪಿ ನಾಯಕರು ಮಾಡಿದ ಮನವಿಯನ್ನು ಇದುವರೆಗೆ ಪುರಸ್ಕರಿಸಲಾಗಿಲ್ಲ.
