ನವದೆಹಲಿ[ಡಿ.17]: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಒಂದು ಹಗರಣ ಎಂದು ಬಿಂಬಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹೇಗೆ ಪಿತೂರಿ ಮಾಡಿದೆ ಎಂಬುದನ್ನು ಬಯಲು ಮಾಡಲು ಬಿಜೆಪಿ ಸೋಮವಾರ (ಇಂದು) ರಾಷ್ಟಾ್ರದ್ಯಂತ 70 ಸರಣಿ ಪತ್ರಿಕಾಗೋಷ್ಠಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ದೇಶದ ರಕ್ಷಣಾ ಸಚಿವಾಲಯ ಘನತೆಗೆ ಕುಂದುಂಟು ಮಾಡುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂಬುದನ್ನು ಬಿಜೆಪಿ ದೇಶದ ಜನತೆಗೆ ಮನವರಿಕೆ ಮಾಡಿಕೊಡಲು ನಿರ್ಧರಿಸಿದೆ.

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿ ತನಿಖೆ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸುಪ್ರೀಂ ತೀರ್ಪು ನೀಡಿತ್ತು. ಆ ನಂತರ ತೀರ್ಪಿನ ಕೆಲ ಅಂಶಗಳನ್ನು ತಿದ್ದುಪಡಿ ಮಾಡಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ ಬೆನ್ನಲ್ಲೇ, ಬಿಜೆಪಿ ದೇಶಾದ್ಯಂತ ಸೋಮವಾರ 70 ಸುದ್ದಿಗೋಷ್ಠಿಗಳನ್ನು ನಡೆಸಲು ನಿಶ್ಚಯಿಸಿದೆ.