ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನಿಂದನಾತ್ಮಕಾ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಚಿವ ರಮಾನಾಥ್ ರೈ ವಿರುದ್ಧ, ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಮುಖಂಡ ರಹೀಂ ಉಚ್ಚಿಲ್ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಮಂಗಳೂರು: ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನಿಂದನಾತ್ಮಕಾ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಚಿವ ರಮಾನಾಥ್ ರೈ ವಿರುದ್ಧ, ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಮುಖಂಡ ರಹೀಂ ಉಚ್ಚಿಲ್ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಮಾತನಾಡುವ ವೇಳೆ ರಮಾನಾಥ ರೈ ಸೂಲಿಬೆಲೆಯವರನ್ನು ‘ಚಕ್ರವರ್ತಿ ಸೂಳೆ’ ‘ದೇಶದ್ರೋಹಿ’ ಎಂಬ ಕೀಳು ಮಟ್ಟದ ಶಬ್ದಗಳನ್ನು ಬಳಸಿ ಅವಮಾನಿಸಿದ್ದಾರೆ ಎಂದು ರಹೀಂ ಉಚ್ಚಿಲ್ ದೂರಿನಲ್ಲಿ ಹೇಳಿದ್ದಾರೆ.
ಕಳೆದ ಸೆ.22ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆ ಬಗ್ಗೆ ವ್ಯಂಗ್ಯವಾಡಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರು ಈ ರೀತಿಯ ಪದ ಬಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
