ಅಮೇಥಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಹೋದರಿ ಪ್ರಿಯಾಂಕ ಗಾಂಧಿ ಮೊದಲ ಬಾರಿಗೆ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ. 

ಫೆಬ್ರವರಿ 4 ರಂದು ಲಕ್ನೋದಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಇಬ್ಬರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. 

2004ರಲ್ಲಿ ಪ್ರಿಯಾಂಕ ಗಾಂಧಿ ರಾಹುಲ್ ಅವರನ್ನು ಅಮೇಥಿ ಅಭ್ಯರ್ಥಿ ಎಂದು ಘೋಷಿಸಿದ್ದರು.  ಇದೀಗ ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ಅವರನ್ನು ರಾಹುಲ್  ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡೆಯಾಗಿ ಪರಿಚಯಿಸಲಿದ್ದಾರೆ. 

ಅಲ್ಲದೇ ಫೆಬ್ರವರಿ 10 ರಂದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಇಬ್ಬರೂ ಕೂಡ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಇಲ್ಲಿ ಪವಿತ್ರ ಸ್ನಾನ ಮಾಡಿ ರೋಡ್ ಶೋ ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.