ವಿಧಾನಸಭಾ ಚುನಾವಣೆಗೆ ಎರಡೂ ಪಕ್ಷಗಳ ನಾಯಕರು ಈಗಲೇ ಸಜ್ಜಾಗುತ್ತಿದ್ದಾರೆ.
ಬೆಂಗಳೂರು(ಆ.01): ಒಂದೇ ದಿನ ಎರಡೂ ರಾಷ್ಟ್ರೀಯ ಪಕ್ಷಗಳ ಮೇರು ನಾಯಕರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.
ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ಎರಡೂ ಪಕ್ಷಗಳ ನಾಯಕರು ಈಗಲೇ ಸಜ್ಜಾಗುತ್ತಿದ್ದಾರೆ.
ರಾಯಚೂರಿನಲ್ಲಿ ಆಗಸ್ಟ್ 12ರಂದು ರಾಜ್ಯಕ್ಕೆ ಬರುತ್ತಿದ್ದಾರೆ. ಆ.4ರಂದು ರಾಯಚೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಆಗಮಿಸಬೇಕಿತ್ತು. ಆದರೆ ಧರಂ ಸಿಂಗ್ ನಿಧನ, ರಾಜ್ಯಸಭೆ ಹಾಗೂ ಉಪರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಭೇಟಿ ರದ್ದಾಗಿತ್ತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್ 12ರಿಂದ ವಿಧಾನಸಭಾ ಚುನಾವಣಾ ತಯಾರಿಗಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯದ್ಯಾಂತ 3 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
