ನವದೆಹಲಿ(ಜ.17): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿರುವ ಶಂಕೆ ವ್ಯಕ್ತವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಜೇಟ್ಲಿ ಆರೋಗ್ಯದ ಕುರಿತು ಚಿಂತಾಕ್ರಾಂತನಾಗಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅಲ್ಲದೇ ಈ ಸಂದರ್ಭದಲ್ಲಿ ಶೇ.100 ರಷ್ಟು ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ.

ಇನ್ನು ಜೇಟ್ಲಿ ಆರೋಗ್ಯ ಸುಧಾರಣೆ ಬಯಸಿ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಕೂಡ ಟ್ವೀಟ್ ಮಾಡಿದ್ದಾರೆ.

‘ತಮ್ಮ ಸಹೋದ್ಯೋಗಿ ಹಾಗೂ ನ್ಯಾಯವಾದಿಯಾಗಿರುವ ಜೇಟ್ಲಿಯವರ ಅನಾರೋಗ್ಯ ವಿಷಯ ಕೇಳಿ ತೀವ್ರ ದುಃಖವಾಯಿತು. ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.