ನವದೆಹಲಿ(ಏ.30):ರಫೆಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಆರೋಪ ಹೊತ್ತಿದ್ದ ರಾಹುಲ್ ಗಾಂಧಿ, ತಮ್ಮ ಹೇಳಿಕೆಗೆ ಸುಪ್ರೀಂಕೋರ್ಟ್ ನಲ್ಲಿ  ಕ್ಷಮೆಯಾಚಿಸಿದ್ದಾರೆ.ಚೌಕಿದಾರ್ ಚೋರ್ ಹೇ ಘೋಷಣೆಗೆ ಸುಪ್ರೀಂಕೋರ್ಟ್ ನ್ನು ತಳಕು ಹಾಕಿದ್ದಕ್ಕೆ ತಪ್ಪನ್ನು ಒಪ್ಪಿಕೊಳ್ಳುವಂತೆ ಸುಪ್ರೀಂಕೋರ್ಟ್ ರಾಹುಲ್ ಗಾಂಧಿ ಅವರಿಗೆ ಸೂಚಿಸಿತ್ತು.

"

ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೋರಿದ್ದು, ಈ ಕುರಿತು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರಿಗೆ ಹೊಸ ಅಫಿಡವಿಟ್ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮೇ.6 ಕ್ಕೆ ಮುಂದೂಡಿದೆ.

ಬಿಜೆಪಿ  ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ  ರಂಜನ್ ಗೋಗಯ್ ಅವರಿದ್ದ ಪೀಠ, ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಅಲ್ಲದೇ ಈ ಕುರಿತು ರಾಹುಲ್ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಕ್ಷಮೆ ಪದವನ್ನು ಬ್ರ್ಯಾಕೆಟ್ ನಲ್ಲಿ ಹಾಕಿದ್ದಕ್ಕೂ ನ್ಯಾಯಪೀಠ ಆಕ್ಷೇಪ ಸಲ್ಲಿಸಿತು.