ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ 66 ಮಂದಿಯನ್ನು ಬಲಿಪಡೆದ ಓಖಿ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಭಾಗಗಳಿಗೆ ಭೇಟಿ ನೀಡಿದ್ದಾರೆ.
ಕನ್ಯಾಕುಮಾರಿ/ವಿಳಿಂಜಮ್(ಕೇರಳ): ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ 66 ಮಂದಿಯನ್ನು ಬಲಿಪಡೆದ ಓಖಿ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಭಾಗಗಳಿಗೆ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಓಖಿ ಚಂಡಮಾರುತಕ್ಕೆ ಬಲಿಯಾದ ಕುಟುಂಬಗಳಿಗೆ ರಾಹುಲ್ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕೃಷಿ ಸಚಿವಾಲಯದಂತೆ ಮೀನುಗಾರಿಕೆಗೂ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಪರವಾಗಿ ಮುಂಬರುವ ಸಂಸತ್ ಅಧಿವೇಶನದಲ್ಲಿ ಆಗ್ರಹಿಸಲಾಗುತ್ತದೆ ಎಂದು ಅವರು ಮೀನುಗಾರ ಕುಟುಂಬಗಳಿಗೆ ಭರವಸೆ ನೀಡಿದ್ದಾರೆ.
