ಗುಜರಾತ್’ಗೆ ಇಂದು ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಹು ಚರ್ಚಿತ ವಿಷಯ ಜಿಎಸ್’ಟಿಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಜಿಎಸ್’ಟಿ ಎಂದರೆ ಗೂಡ್ಸ್ ಅಂಡ್ ಸರ್ವಿಸ್ ಟ್ಯಾಕ್ಸ್ ಅಲ್ಲ; ಇದು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಲೇವಡಿ ಮಾಡಿದ್ದಾರೆ.
ಅಹ್ಮದಾಬಾದ್ (ಅ.23): ಗುಜರಾತ್’ಗೆ ಇಂದು ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಹು ಚರ್ಚಿತ ವಿಷಯ ಜಿಎಸ್’ಟಿಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಜಿಎಸ್’ಟಿ ಎಂದರೆ ಗೂಡ್ಸ್ ಅಂಡ್ ಸರ್ವಿಸ್ ಟ್ಯಾಕ್ಸ್ ಅಲ್ಲ; ಇದು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಲೇವಡಿ ಮಾಡಿದ್ದಾರೆ.
ಎಂದಿನಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕೇಂದ್ರ ಸರ್ಕಾರವು ಗುಜರಾತ್ ಜನರ ದನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಗುಜರಾತ್ ಯುವ ಜನತೆ ಉದ್ಯೋಗ, ಶಿಕ್ಷಣ, ಆರೋಗ್ಯ ಸೌಲಭ್ಯವನ್ನು ಬಯಸಿದ್ದು ಆದರೆ ಅದನ್ನು ಪೂರೈಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ನರೇಂದ್ರ ಪಟೇಲ್ ನನಗೆ ಬಿಜೆಪಿ ಹಣದ ಆಮೀಷವೊಡ್ಡಿತ್ತು ಎಂದು ಹೇಳಿದ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಸರ್ಕಾರ ನರೇಂದ್ರ ಪಟೇಲ್ ಎಷ್ಟು ಹಣ ನೀಡಲು ಮುಂದಾಗಿತ್ತು ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ ಗುಜರಾತಿನ ಯುವ ಜನತೆ ಮಾರಾಟಕ್ಕಿಲ್ಲ ಎಂದು ಹೇಳಿದ್ದಾರೆ.
ಏತನ್ಮಧ್ಯೆ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್ ಡ್ರಾಮಾಬಾಜ್ ನಂ 1 ಪಕ್ಷ ಎಂದು ಟೀಕಿಸಿದೆ.
