Asianet Suvarna News Asianet Suvarna News

2019ರಲ್ಲಿ ಮತ್ತೆ ಅರಳಲಿದೆ ಕಮಲ

ಬಿಜೆಪಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಳ್ಳಬಹುದು ಆದರೆ ಜನರು ಅವರನ್ನು ಮುಂದಿನ ಚುನಾವಣೆಯಲ್ಲಿ ಅಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.   

Rahul Gandhi can hug PM but people will not hug him in 2019 Loksabha Election
Author
Bengaluru, First Published Jul 23, 2018, 12:24 PM IST

ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಲವಂತವಾಗಿ ಅಪ್ಪಿಕೊಂಡಿರ ಬಹುದು. ಆದರೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನರು ರಾಹುಲ್ ಗಾಂಧಿ ಅವರನ್ನು ಅಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ಭಾನುವಾರ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರ ಭಾಷಣಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಅನಿಲ್ ಬಾಲುನಿ, ಲೋಕಸಭೆ ಚುನಾವಣೆಯಲ್ಲಿ ಜನರು ರಾಹುಲ್ ರನ್ನು ತಿರಸ್ಕರಿಸಲಿದ್ದಾರೆ. ಸೋಲಿನ ಭೀತಿ ಹಿನ್ನೆಲೆಯಲ್ಲಿ ಹತಾಶ ಗೊಂಡಿರುವ ಕಾಂಗ್ರೆಸ್ ಕೇವಲ 150 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಆದರೆ, ರಾಹುಲ್ ಗಾಂಧಿ ಅವರು ಪ್ರಧಾನಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಬಾಲುನಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮೋದಿ ಅವರನ್ನು ಬಲವಂತವಾಗಿ ಅಪ್ಪಿಕೊಂಡಿರಬಹುದು, ಆದರೆ, ಜನರು ರಾಹುಲ್‌ರನ್ನು 2019 ರ ಚುನಾವಣೆಯಲ್ಲಿ ಅಪ್ಪಿಕೊಳ್ಳುವುದಿಲ್ಲ. ಹೀಗಾಗಿ ರಾಹುಲ್ ಗಾಂಧಿ 2024 ರಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳುವುದು ಒಳಿತು ಎಂದು ಬಾಲು ನಿ ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios