ಅಮೇಥಿಯಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಗೆ  ಪ್ರಧಾನಿ  ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಯಾಕೆಂದರೆ ಅವರು ಇಟಾಲಿಯನ್ ಕನ್ನಡಕವನ್ನು ಹಾಕಿಕೊಂಡಿದ್ದಾರೆ. ಹಾಗಾಗಿ ಅವರಿಗೆ ದೇಶದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ನವದೆಹಲಿ (ಅ.10): ಅಮೇಥಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಯಾಕೆಂದರೆ ಅವರು ಇಟಾಲಿಯನ್ ಕನ್ನಡಕವನ್ನು ಹಾಕಿಕೊಂಡಿದ್ದಾರೆ. ಹಾಗಾಗಿ ಅವರಿಗೆ ದೇಶದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಕ್ಷೇತ್ರವಾದ ಅಮೇಥಿಯಲ್ಲಿ ರ್ಯಾಲಿ ನಡೆಸುತ್ತಿರುವ ಅಮಿತ್ ಶಾ, ಅಲ್ಲಿ ಅಭಿವೃದ್ಧಿಯಾಗದೇ ಇರುವುದಕ್ಕೆ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು, 60 ವರ್ಷಗಳಿಂದ ದೇಶದ ಆಡಳಿತವನ್ನು ನಡೆಸಿದ್ದೀರಿ. ಆದರೂ ನಿಮ್ಮ ಕ್ಷೇತ್ರವನ್ನೇ ಅಭಿವೃದ್ಧಿಪಡಿಸಲು ಆಗಿಲ್ಲ. ಹಾಗಿರುವಾಗ ಪ್ರಧಾನಿ ನರೇಂದ್ರ ಮೋದಿಯವರ 3 ವರ್ಷದ ಅಭಿವೃದ್ಧಿ ಕಾರ್ಡನ್ನು ಕೇಳುತ್ತಿದ್ದೀರಿ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅಮೇಥಿಯಿಂದ ಸಂಸದನಾಗಿ ಹೋದ ಮೇಲೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೂ ಸಹ ಭೇಟಿ ನೀಡಿಲ್ಲ. ಆದರೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಸೋತರೂ ಕೂಡಾ ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದರು.