ಎಐಸಿಸಿ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಮೊತ್ತಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು(ಡಿ.7): ಎಐಸಿಸಿ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಮೊತ್ತಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ರಾಜ್ಯದಲ್ಲಿ ಬಿಜೆಪಿ ಓಟಕ್ಕೆ ಕಡಿವಾಣ ಹಾಕಲು 15 ಅಗ್ರ ನಾಯಕರೊಂದಿಗೆ ತಡರಾತ್ರಿವರೆಗೆ ಗುಪ್ತ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆಯ್ಕೆಯಾಗಿ ಡಿ.19ರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಾಗುತ್ತಿದ್ದಂತೆಯೇ ದೇಶಾದ್ಯಂತ ಪರ್ಯಟನೆ ನಡೆಸಲಿರುವ ಅವರು ಮೊದಲಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.