ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವರ್ಚಸ್ಸು ಯಾವುದೇ ಜಾದೂ ಮಾಡುವುದಿಲ್ಲ. ಜಾತಿ ರಾಜಕಾರಣಕ್ಕಾಗಿ ಗುಜರಾತ್ ಚುನಾವಣೆಯಲ್ಲಿ ಸೋತ ರೀತಿಯಲ್ಲೇ, ಕರ್ನಾಟಕದಲ್ಲೂ ಕಾಂಗ್ರೆಸ್ ಸೋಲಿನ ರುಚಿ ಅನುಭವಿಸಲಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರು (ಡಿ.25): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವರ್ಚಸ್ಸು ಯಾವುದೇ ಜಾದೂ ಮಾಡುವುದಿಲ್ಲ. ಜಾತಿ ರಾಜಕಾರಣಕ್ಕಾಗಿ ಗುಜರಾತ್ ಚುನಾವಣೆಯಲ್ಲಿ ಸೋತ ರೀತಿಯಲ್ಲೇ, ಕರ್ನಾಟಕದಲ್ಲೂ ಕಾಂಗ್ರೆಸ್ ಸೋಲಿನ ರುಚಿ ಅನುಭವಿಸಲಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿರುವುದು ಕಾಂಗ್ರೆಸ್‌ಗೆ ಪುನಶ್ಚೇತನ ಉಂಟು ಮಾಡಿಲ್ಲ. ಅವರ ಪದೋನ್ನತಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳಲ್ಲಿ ಪಕ್ಷವನ್ನು ಮತ್ತೊಮ್ಮೆ ಮುಳುಗುವಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಗುಜರಾತ್ ಚುನಾವಣಾ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಸರ್ಕಾರ ಕಾರ್ಯನಿರ್ವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿದ್ದು ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಯಾವಾಗಲೂ ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜನೆಯ ರಾಜಕಾರಣ ಮಾಡುತ್ತದೆ. ಕರ್ನಾಟಕದ ಸಿದ್ಧರಾಮಯ್ಯ ಸರ್ಕಾರ ಇದಕ್ಕಿಂತ ಭಿನ್ನವಾಗಿಲ್ಲ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ವಿಷಯವೇ ತೆಗೆದುಕೊಳ್ಳಿ. ಇದು ಸಮಾಜದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಇದು ಕೇವಲ ಚುನಾವಣಾ ಲಾಭಕ್ಕಾಗಿ ಲಿಂಗಾಯತ ಸಮಾಜವನ್ನು ವಿಭಜಿಸುವುದು ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಉದ್ದೇಶವಾಗಿದೆ. ಟಿಪ್ಪು ಜಯಂತಿ ಆಚರಿಸುವ ಮೂಲಕ ಸರ್ಕಾರ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ಇದರಿಂದಾಗಿ ಕರಾವಳಿ ಮತ್ತು ಕೊಡಗಿನಲ್ಲಿ ಕೋಮು ಉದ್ವಿಗ್ನತೆಗೆ ಉತ್ತೇಜನ ನೀಡಿದಂತಾಗಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
