ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಬಳಿಕ ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ. ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಆಧಿರ್ ಬದಲಾವಣೆ ಬಳಿಕ ಅವರಿಂದ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಯಾಚಿಸಿದ್ದಾರೆ.
ಕೋಲ್ಕತಾ : ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧಿರ್ ರಂಜನ್ ಚೌಧರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದು, ಇದಕ್ಕೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದರು. ಇದಾದ ಬೆನ್ನಲ್ಲೇ ಇದೀಗ ರಾಹುಲ್ ಅವರ ಬಳಿ ಕ್ಷಮೆ ಯಾಚಿಸಿದ್ದಾರೆ ಎನ್ನಲಾಗಿದೆ.
ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸುವ ಮುನ್ನ ಮಾಹಿತಿ ನೀಡಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡರ ವಿರುದ್ಧವೂ ಅಧಿರ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಇನ್ನು ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಬಂಗಾಳಕ್ಕೆ ಭೇಟಿ ನೀಡಿದ್ದು, ಚೌಧರಿ ಅವರು ಎಲ್ಲರ ಎದುರೇ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಸುವ ಮೊದಲು ತಮಗ್ಯಾಕೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದರು.
ಈ ವೇಳೆ ರಾಹುಲ್ ಗಾಂಧಿ ಅವರು ಚೌಧರಿ ಬಳಿ ಕ್ಷಮೆ ಯಾಚಿಸಿದ್ದಾರೆ ಎನ್ನಲಾಗಿದೆ.
