ಯುವಜನತೆಗೆ ಉದ್ಯೋಗವನ್ನು ನೀಡುವಲ್ಲಿ ಹಾಗೂ ರೈತರ ಆದಾಯವನ್ನು ಹೆಚ್ಚುಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.  ನಮ್ಮ ಪಕ್ಷ ಕೇವಲ 6 ತಿಂಗಳಲ್ಲಿ ದೇಶದ ಆರ್ಥಿಕತೆಯನ್ನು ಸರಿ ದಾರಿಗೆ ತರುತ್ತದೆ ಎಂದು ರಾಹುಲ್ ಹೇಳಿದ್ದಾರೆ.

ನವದೆಹಲಿ (ಅ.04): ಯುವಜನತೆಗೆ ಉದ್ಯೋಗವನ್ನು ನೀಡುವಲ್ಲಿ ಹಾಗೂ ರೈತರ ಆದಾಯವನ್ನು ಹೆಚ್ಚುಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ನಮ್ಮ ಪಕ್ಷ ಕೇವಲ 6 ತಿಂಗಳಲ್ಲಿ ದೇಶದ ಆರ್ಥಿಕತೆಯನ್ನು ಸರಿ ದಾರಿಗೆ ತರುತ್ತದೆ ಎಂದು ರಾಹುಲ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ದೇಶದ ಸಮಯವನ್ನು ವೇಸ್ಟ್ ಮಾಡಬಾರದು. ರೈತರು ಹಾಗೂ ಯುವಜನತೆಯತ್ತ ಗಮನವನ್ನು ಕೊಡಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ ಹೇಳಲಿ, ಕಾಂಗ್ರೆಸ್ ಕೇವಲ 6 ತಿಂಗಳಲ್ಲಿ ಮಾಡಿ ತೋರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮೋದಿವಯರು ಮೇಕ್ ಇನ್ ಇಂಡಿಯಾ, ಸ್ಟಾರ್ಟ್ಸ್ ಅಪ್ ಬಗ್ಗೆ ಮಾತನಾಡುತ್ತಾರೆ. ಆದರೆ ಉದ್ಯೋಗವನ್ನು ಮಾತ್ರ ನೀಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಮೂರು ವರ್ಷಗಳಿಗೆ ಹೋಲಿಸಿದರೆ ಕಳೆದ 4 ತಿಂಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ. 5.7 ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.