ಇಂದು ಸಾಂಸ್ಕೃತಿಕ ನಗರಿಯಲ್ಲಿ ರಾಹುಲ್ ಗಾಂಧಿ

First Published 24, Mar 2018, 7:48 AM IST
Rahul Gandhi in Mysore
Highlights

ರಾಜ್ಯದಲ್ಲಿ ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್​ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಸೇರಿದಂತೆ ಮೈಸೂರು ಭಾಗದಲ್ಲಿ ಮಾ.24, 25ರಂದು ಎರಡು ದಿನಗಳ ಕಾಲ ಪ್ರಚಾರ ರ್ಯಾಲಿ, ಬಹಿರಂಗ ಸಭೆ ನಡೆಸಲಿದ್ದಾರೆ.

ಬೆಂಗಳೂರು (ಮಾ.24): ರಾಜ್ಯದಲ್ಲಿ ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್​ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಸೇರಿದಂತೆ ಮೈಸೂರು ಭಾಗದಲ್ಲಿ ಮಾ.24, 25ರಂದು ಎರಡು ದಿನಗಳ ಕಾಲ ಪ್ರಚಾರ ರ್ಯಾಲಿ, ಬಹಿರಂಗ ಸಭೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 9ಕ್ಕೆ ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್, ಚಾಮುಂಡೇಶ್ವರಿ ದರ್ಶನ ಪಡೆಯ ಲಿದ್ದಾರೆ. ಬೆಳಗ್ಗೆ 10.15ಕ್ಕೆ ಮಹಾರಾಣಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ತೆರಳಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲದಲ್ಲಿ ರೋಡ್ ಶೋ, ಮಳವಳ್ಳಿಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 
 

loader