ರಾಹುಲ್ ಗಾಂಧಿ ನಿಫಾ ವೈರಸ್ ಇದ್ದಂಗೆ ಎಂದ ಹರ್ಯಾಣ ಸಚಿವ

Rahul Gandhi Is Like Nipah Virus," Says Haryana Minister Anil Vij
Highlights

ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಈಗ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರು ಕೂಡ ನಾಶವಾಗುತ್ತಾರೆ . ಕೇರಳದಲ್ಲಿ ನಿಫಾ ವೈರಸ್'ಗೆ  ಈಗಾಗಲೇ 14 ಮಂದಿ ಮೃತಪಟ್ಟಿದ್ದಾರೆ. ಈ ರೋಗಾಣುವನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಹೋಲಿಸಿದ್ದಾರೆ. ಹರ್ಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲೇ ಹೆಚ್ಚು ಪ್ರಸಿದ್ಧಿ ಪಡೆದವರು.

ನವದೆಹಲಿ(ಮೇ.29): ರಾಹುಲ್ ಗಾಂಧಿ ನಿಫಾ ವೈರಸ್ ಇದ್ದಂಗೆ ಜೊತೆಯಲ್ಲಿದ್ದವರು ಹಾಗೂ ಸಹವಾಸ ಮಾಡಿದವರು ನಾಶವಾಗಿ ಹೋಗುತ್ತಾರೆ ಎಂದು ಹರ್ಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಈಗ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರು ಕೂಡ ನಾಶವಾಗುತ್ತಾರೆ . ಕೇರಳದಲ್ಲಿ ನಿಫಾ ವೈರಸ್'ಗೆ  ಈಗಾಗಲೇ 14 ಮಂದಿ ಮೃತಪಟ್ಟಿದ್ದಾರೆ. ಈ ರೋಗಾಣುವನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಹೋಲಿಸಿದ್ದಾರೆ.
ಹರ್ಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲೇ ಹೆಚ್ಚು ಪ್ರಸಿದ್ಧಿ ಪಡೆದವರು. ಕಳೆದ ವರ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ  ಭಾರತ ಕಾಂಗ್ರೆಸ್ ಮುಕ್ತವಾಗಿ ಪ್ರಧಾನಿ ಮೋದಿ ಅವರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದಿದ್ದರು.
ಭಾರತೀಯ ನೋಟುಗಳಲ್ಲಿ ಮಹಾತ್ಮ ಗಾಂಧಿ ಚಿತ್ರದ ಬದಲು ಮೋದಿ ಭಾವಚಿತ್ರವನ್ನು ಸೇರಿಸಬೇಕೆಂದಿದ್ದರು. ಈ ಹೇಳಿಕೆಯಿಂದ ಬಿಜೆಪಿ ಅಂತರವನ್ನು ಕಾಯ್ದುಕೊಂಡಿತ್ತು. ಅನಿಲ್ ಆಗಾಗ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಆದರೆ ಬಿಜೆಪಿ ಯಾವುದೇ ರೀತಿಯ ಕ್ರಮಕ್ಕೆ ಮುಂದಾಗುತ್ತಿಲ್ಲ.

loader