ಮಾನನಷ್ಟವಾಗುವ ಹೇಳಿಕೆಯನ್ನು ರಾಹುಲ್ ಗಾಂಧಿ ನೀಡಿಲ್ವಂತೆ!

Rahul Gandhi pleads 'not guilty' in defamation case
Highlights

ಅಪರಾಧಿ ನಾನಲ್ಲ, ಅಪರಾಧ ಎನಗಿಲ್ಲ ಹೀಗೆಂದು ಹೇಳಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಮಹಾತ್ಮ ಗಾಂಧಿ ಹತ್ಯೆ ಕುರಿತಂತೆ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಿದರು.

 

ಮುಂಬೈ: ಅಪರಾಧಿ ನಾನಲ್ಲ, ಅಪರಾಧ ಎನಗಿಲ್ಲ ಹೀಗೆಂದು ಹೇಳಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಮಹಾತ್ಮ ಗಾಂಧಿ ಹತ್ಯೆ ಕುರಿತಂತೆ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಿದರು.

ಆರ್‌ಎಸ್‌ಎಸ್‌ ವಿರುದ್ಧ ನೀಡಿದ್ದ ಹೇಳಿಕೆ ಅವರನ್ನು ಮಾನನಷ್ಟ ಮೊಕದ್ದಮೆಗೆ ಸಿಲುಕಿಸಿದ್ದು ನ್ಯಾಯಾಲಯ ಹಾಜರಾಗಿ ವಿವರಣೆ ನೀಡುವಂತೆ ಹೇಳಿತ್ತು. ಅದರಂತೆ ರಾಹುಲ್ ಗಾಂಧಿ ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಹಾಜರಾಗಿ ಹೇಳಿಕೆ ನೀಡಿದರು.

ಮಹಾತ್ಮ ಗಾಂಧಿಯವರ ಹತ್ಯೆ ಹಿಂದೆ ಆರ್ ಎಸ್ ಎಸ್ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್‌ ಕುಂಟೆ ಎನ್ನುವವರು 2014ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಬಿಜೆಪಿ ವಿರುದ್ಧ ವಾಗ್ದಾಳಿ 
ನಿನ್ನೆ ಸಹ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದ ರಾಹುಲ್ ಇಂದು ಅದನ್ನು ಮುಂದುವರಿಸಿದರು. ರೈತರ ಸಮಸ್ಯೆಗಳು, ಉದ್ಯೋಗ ಸೃಷ್ಟಿಯತ್ತ ಗಮನ ಕೊಡಬೇಕಾದ ಸರಕಾರ ಅನವಶ್ಯಕ ವಿಚಾರಗಳಿಗೆ ಬೆಲೆ ಕೊಡುತ್ತಿದೆ. ರೈತರ ಮತ್ತು ಕಾರ್ಮಿಕರ ಹಿತ ಕಡೆಗಣನೆ ಮಾಡಲಾಗಿದ್ದು ಇನ್ಷಷ್ಟು ಪ್ರಕರಣ ದಾಖಲಾದರೂ ನಾನು ಹೆದರುವುದಿಲ್ಲ ಎಂದರು.

 

loader