ಇಫ್ತಾರ್ ಕೂಟದಲ್ಲಿ ಪ್ರಣಬ್-ರಾಹುಲ್ ಅಕ್ಕಪಕ್ಕರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟಇಫ್ತಾರ್ ಕೂಟದಲ್ಲಿ ಹಲವು ಗಣ್ಯರು ಭಾಗಿ
ನವದೆಹಲಿ(ಜೂ.13): ರಂಜಾನ್ ನಿಮಿತ್ತ ಕಾಂಗ್ರೆಸ್ ಪಕ್ಷ ಇಂದು ಇಫ್ತಾರ್ ಕೂಟ ಆಯೋಜಿಸಿತ್ತು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಇಫ್ತಾರ್ ಕೂಟ ಆಯೋಜಿಸಿದ್ದು, ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರುಗಳಾದ ಮಲ್ಲಿಕಾರ್ಜುನ್ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಅಲ್ಲದೇ ಸಿಪಿಎಂ ನಾಯಕ ಸೀತಾರಾಂ ಯೆಚೂರಿ, ಶರದ್ ಯಾದವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಪ್ರಣಬ್ ಮುಖಜಿರ್ಜಿ ಅವರು ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದ ಬಳಿಕ ಅವರನ್ನು ಇಫ್ತಾರ್ ಕೂಟದಿಂದ ಹೊರಗಿಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಪ್ರಣಬ್ ಅವರು ರಾಹುಲ್ ಗಾಂಧಿ ಅವರ ಪಕ್ಕದಲ್ಲಿಯೇ ಕುಳಿತಿದ್ದು ವಿಶೇಷವಾಗಿತ್ತು.
