ನವದೆಹಲಿ (ಡಿ. 27): ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮುನ್ನ 2 ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಘೋಷಿಸಿದ ನೋಟು ನಿಷೇಧವು ವಿಫಲವಾಗಿದೆ. ಜನರು ಈ ಕ್ರಮದಿಂದ ನರಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ವೃಥಾ ಆರೋಪ ಮಾಡುವುದು ಸರಿಯಲ್ಲ. 2 ಜಿ ಸ್ಪ್ರೆಕ್ಟ್ರಂ ಹಾಗೂ ಕಲ್ಲಿದ್ದಲು ಹಗರಣದ ಬಗ್ಗೆ ಮಾತನಾಡಿ ಎಂದು ರಾಹುಲ್ ಗೆ ಪ್ರಶ್ನಿಸಿದ್ದಾರೆ.

ಇದೇ ವೇಲೆ ಪ್ರಧಾನಿ ಮೋದಿಯವರ ಬಗ್ಗೆ ಆರೋಪಿಸಿದ ಮಾಯಾವತಿಯರಿಗೂ ಚುರುಕು ಮುಟ್ಟಿಸಿದ್ದಾರೆ. ತಾನು ಮಾಡಿರುವ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಮಾಯಾವತಿಯವರು ದಲಿತ ಕಾರ್ಡ್ ಗಳಲ್ಲಿ ಬಳಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.