ಉದ್ಯೋಗಕ್ಕಾಗಿ ಯುವಜನತೆ ಪರದಾಡುತ್ತಿದೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಗಡಿಯಲ್ಲಿ ಸೈನಿಕರು ಸಾಯುತ್ತಿದ್ದಾರೆ, ಕೇಂದ್ರ ಸರ್ಕಾರ ಏನಕ್ಕೆ ಸಂಭ್ರಮಾಚರಣೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ನವದೆಹಲಿ (ಮೇ.16): ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಮೂರು ವರ್ಷಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವರ್ಷಗಳು ಈಡೇರದ ಭರವಸೆಗಳು ಹಾಗೂ ಜನಾದೇಶಕ್ಕೆ ದ್ರೋಹ ಬಗೆದಿರುವುದೇ ಮೋದಿ ಸರ್ಕಾರದ 3 ವರ್ಷಗಳ ಸಾಧನೆಯೆಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ಉದ್ಯೋಗಕ್ಕಾಗಿ ಯುವಜನತೆ ಪರದಾಡುತ್ತಿದೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಗಡಿಯಲ್ಲಿ ಸೈನಿಕರು ಸಾಯುತ್ತಿದ್ದಾರೆ, ಕೇಂದ್ರ ಸರ್ಕಾರ ಏನಕ್ಕೆ ಸಂಭ್ರಮಾಚರಣೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ 3 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯು ‘ಮೋದಿ ಫೆಸ್ಟ್’ ಆಚರಿಸುವ ಮೂಲಕ ಸಂಭ್ರಮಾಚರಣೆ ಮಾಡಲಿದೆ ಎಂದು ವರದಿಯಾಗಿದೆ.