ಕೆಲವು ವರ್ಷಗಳ ಹಿಂದೆ ಪಂಜಾಬ್’ನಲ್ಲಿ ಬಹಳ ಪ್ರಗತಿ ಹೊಂದಿತ್ತು. ಇಲ್ಲಿನ ಯುವಜನತೆ ತಮ್ಮ ಭವಿಷ್ಯದ ಬಗ್ಗೆ ಕಾಳಜಿ ಹೊಂದಿತ್ತು. ಆದರೆ ಶಿರೋಮಣಿ ಅಕಾಲಿದಳ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ, ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಾಜಿತಾ, ಪಂಜಾಬ್ (ಜ. 27): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ ರಾಹುಲ್ ಗಾಂಧಿ ಇಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿನ ಚುನಾವಣಾ ರ್ಯಾಲಿಯನ್ನುದ್ದೇಶಿ ಮಾತನಾಡಿದ ರಾಹುಲ್ ಗಾಂಧಿ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಪ್ರಧಾನಿ ಮೋದಿ, ಪಂಜಾಬನ್ನು ಸರ್ವನಾಶ ಮಾಡಿದ ಅಕಾಲಿದಳವನ್ನು ಬೆಂಬಲಿಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಪಂಜಾಬ್’ನಲ್ಲಿ ಬಹಳ ಪ್ರಗತಿ ಹೊಂದಿತ್ತು. ಇಲ್ಲಿನ ಯುವಜನತೆ ತಮ್ಮ ಭವಿಷ್ಯದ ಬಗ್ಗೆ ಕಾಳಜಿ ಹೊಂದಿತ್ತು. ಆದರೆ ಶಿರೋಮಣಿ ಅಕಾಲಿದಳ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ, ಎಂದು ಹೇಳಿದ್ದಾರೆ.
ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ ರಾಹುಲ್ ಗಾಂಧಿ, ಪಂಜಾಬ್ ರಾಜ್ಯದಿಂದ ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕುವುದಾಗಿ ಹೇಳಿದ್ದಾರೆ.
