ಕೇಂದ್ರದಿಂದಾಗದ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಮಾಡಿದೆ : ರಾಹುಲ್

First Published 26, Feb 2018, 1:02 PM IST
Rahul Gandhi Slams Union Govt
Highlights

ಬೆಳಗಾವಿ ಜಿಲ್ಲೆಯ  ಗೊಡಚಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದು, ಇಲ್ಲಿ ನಡೆಯುವ ಕಾಂಗ್ರೆಸ್ ಜನಾಶಿರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಈ ವೇಳೆ ರಾಹುಲ್ ಗಾಂಧಿ ಕನ್ನಡದಲ್ಲಿ ಭಾಷಣ ಮಾಡಿದ್ದು, ಮತ್ತೊಮ್ಮೆ  ಬಸವಣ್ಣನವರನ್ನು ಸ್ಮರಿಸಿದ್ದಾರೆ.

ಬೆಳಗಾವಿ :  ಬೆಳಗಾವಿ ಜಿಲ್ಲೆಯ  ಗೊಡಚಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದು, ಇಲ್ಲಿ ನಡೆಯುವ ಕಾಂಗ್ರೆಸ್ ಜನಾಶಿರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಈ ವೇಳೆ ರಾಹುಲ್ ಗಾಂಧಿ ಕನ್ನಡದಲ್ಲಿ ಭಾಷಣ ಮಾಡಿದ್ದು, ಮತ್ತೊಮ್ಮೆ  ಬಸವಣ್ಣನವರನ್ನು ಸ್ಮರಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದು, ಉದ್ಯೋಗ ಸೃಷ್ಟಿಯಲ್ಲಿಯೂ ಕೂಡ  ಅವರು ವಿಫಲರಾಗಿದ್ದಾರೆ.

ಕರ್ನಾಟಕ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ತಮ್ಮ ಪಕ್ಷದ ಭ್ರಷ್ಟಾಚಾರಿಗಳನ್ನೇ ಅಕ್ಕಪಕ್ಕದಲ್ಲೇ ಕೂರಿಸಿಕೊಳ್ಳುತ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಜನೋಪಯೋಗಿ ಕಾರ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿಯನ್ನು ದೇಶದ ಜನತೆ ನಾಯಕನಾಗಿ  ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

 

 

loader