ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಫೋಬಿಯಾದಿಂದ ನರಳುತ್ತಿದ್ದಾರೆ. ಕಾಶ್ಮೀರ ಕಣಿವೆ ಪ್ರದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲವೆಂದು ಬಿಜೆಪಿ ನಾಯಕ ಸುದೇಶ್ ವರ್ಮಾ ವ್ಯಂಗ್ಯವಾಡಿದ್ದಾರೆ.

ನವದೆಹಲಿ (ಜೂ.04): ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಫೋಬಿಯಾದಿಂದ ನರಳುತ್ತಿದ್ದಾರೆ. ಕಾಶ್ಮೀರ ಕಣಿವೆ ಪ್ರದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲವೆಂದು ಬಿಜೆಪಿ ನಾಯಕ ಸುದೇಶ್ ವರ್ಮಾ ವ್ಯಂಗ್ಯವಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಣಿವೆ ಪ್ರದೇಶದಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ನೀಡಿದ ಅಂಕಿ-ಅಂಶಗಳನ್ನು ರಾಹುಲ್ ಗಾಂಧಿ ನೋಡಲು ಇಷ್ಟಪಡುವುದಿಲ್ಲ. ಯುಪಿಎ ಆಡಳಿತಕ್ಕೆ ಹೋಲಿಸಿದರೆ ಕಳೆದ ಮೂರು ವರ್ಷದಲ್ಲಿ ಎನ್ ಡಿಎ ಸರ್ಕಾರ ಭಯೋತ್ಪಾದನೆಯನ್ನು ಮಟ್ಟ ಹಾಕಿದೆ ಎಂದು ಸುದೇಶ್ ವರ್ಮಾ ಹೇಳಿದ್ದಾರೆ. ಕಾಶ್ಮೀರ ಕಣಿವೆ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸುವ ಮುನ್ನ 2010 ರಲ್ಲಿ ನಡೆದ ಇಂತಹದೇ ಘಟನೆಯನ್ನು ಅವರೊಮ್ಮೆ ಅವಲೋಕಿಸಲಿ ಎಂದು ವರ್ಮಾ ಹೇಳಿದ್ದಾರೆ.