ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಸರ್ಕಾರವೇ ನಂ.1!!! ನಮ್ಮ ಚುನಾವಣಾ ಪ್ರಚಾರಕ್ಕೆ ಭರ್ಜರಿ ಚಾಲನೆ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಅಮಿತ್ ಶಾ ಭರ್ಜರಿ ಆರಂಭ ನೀಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ಬಾಯ್ತಪ್ಪಿನಿಂದ, ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಸರ್ಕಾರವೇ ನಂ.1 ಎಂದು ಹೆಳಿದ್ದರು.

ಆ ವಿಡಿಯೋವನ್ನು ಹಾಕಿಕೊಂಡಿರುವ ರಾಹುಲ್ ಗಾಂಧಿ, ನಮ್ಮ ಚುನಾವಣಾ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಿದ್ದಾರೆ ಎಂದು ಟ್ವೀಟಿಸಿದ್ದಾರೆ.