ಎಐಸಿಸಿ 49ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ತಮ್ಮ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನೂತನ ಸಾರಥಿ ರಾಹುಲ್ ಎಲ್ಲಾ ಭಾರತೀಯರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.
ನವದೆಹಲಿ(ಡಿ.16): ಎಐಸಿಸಿ 49ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ತಮ್ಮ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನೂತನ ಸಾರಥಿ ರಾಹುಲ್ ಎಲ್ಲಾ ಭಾರತೀಯರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.
ಅಲ್ಲದೇ ಇದೇ ವೇಳೆ ರಾಹುಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಗಲಭೆಗಳು ಹೆಚ್ಚಾಗುತ್ತಿವೆ, ಇದೊಂದು ನಾಚಿಕೆಗೇಡಿನ ಸಂಗತಿ. ದೇಶದಲ್ಲಿ ಜನರನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ನನ್ನ ಕುರಿತ ವೈಯಕ್ತಿಕ ದಾಳಿ ನನ್ನನ್ನು ಮತ್ತಷ್ಟು ಗಟ್ಟಿಯಾಗಿಸಿದೆ, ವಿರೋಧಿಗಳು ನನ್ನನ್ನು ದ್ವೇಷಿಸಿದಷ್ಟು ನಾನು ಅವರನ್ನು ಪ್ರೀತಿಸುತ್ತೇನೆ ಎಂದಿದ್ದಾರೆ. ನಮ್ಮದು ಅತ್ಯಂತ ಹಳೆಯ ಪಕ್ಷವಾಗಿದ್ದು, ಅದರ ನಿರ್ಮೂಲನೆ ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
