ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ರೋಡ್ ಶೋ, ಸಾರ್ವಜನಿಕ ಕಾರ್ಯಕ್ರಮ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಚರಣೆಗಾಗಿ ನ. 19 ರಿಂದ 21ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ರೋಡ್ ಶೋ, ಸಾರ್ವಜನಿಕ ಕಾರ್ಯಕ್ರಮ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಚರಣೆಗಾಗಿ ನ. 19 ರಿಂದ 21ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ ನ. 19ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಅಂದು ಅಲ್ಲಿ ಆಯೋಜಿಸಲಾಗಿರುವ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿಯು ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ ಜನ್ಮ ನೀಡಿದ ಚಿಕ್ಕಮಗಳೂರಿನಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಿದ್ದು, ಅದರಲ್ಲಿ ಪಾಲ್ಗೊಳ್ಳುವ ಅವರು ಸಂಜೆ ಮಂಗಳೂರು, ಉಡುಪಿ, ಉತ್ತರಕನ್ನಡ,
ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಂಗ್ರೆಸ್ ನಾಯಕರ ಸಭೆ ನಡೆಸಲಿದ್ದಾರೆ. ಅತ್ಯಂತ ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಬಿಜೆಪಿಯ ಚುನಾವಣಾ ಕಾರ್ಯತಂತ್ರಕ್ಕೆ ಪ್ರತಿತಂತ್ರ ರೂಪಿಸುವ ದೃಷ್ಟಿಯಿಂದ ಈ ಸಭೆ ನಡೆಯಲಿದೆ.
