ಬೆಂಗಳೂರು(ಮಾ.12): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪ್ರವಾಸ ಮಾಡಲಿದ್ದಾರೆ.

ಮಾರ್ಚ್ 21 ರಂದು ಹಾಸನದ‌ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೊ ಬೃಹತ್ ಜನಾಶಿರ್ವಾದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಮಾರ್ಚ್21 ಕ್ಕೆ ಚಿಕ್ಕಮಗಳೂರು ಪ್ರವಾಸ ಮುಗಿಸಿ ಹಾಸನಕ್ಕೆ ಆಗಮಿಸಲಿದ್ದಾರೆ.